Friday, July 1, 2022

Latest Posts

ನಕಲಿ ಆಡಿಯೋ: ಸಿಎಂಗೆ ನಳಿನ್ ಕುಮಾರ್ ಕಟೀಲ್ ದೂರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮಂಗಳೂರು:

ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಯಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿದ್ದೇನೆ ಎಂದು ನಳಿನ್‍ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಳಿನ್‍ ಕುಮಾರ್ ಅವರ ಪತ್ರವನ್ನು ಬಿಜೆಪಿ ಕರ್ನಾಟಕ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss