ದೆಹಲಿ-ಬೆಂಗಳೂರು ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಹುಸಿ ಬಾಂಬ್ ಕರೆ: ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ-ಬೆಂಗಳೂರು ಮಾರ್ಗದಲ್ಲಿ ಓಡಾಡುವ ಕರ್ನಾಟಕ ಎಕ್ಸ್ ಪ್ರೆಸ್(KK ಎಕ್ಸ್ ಪ್ರೆಸ್) ರೈಲಿನಲ್ಲಿ ಪ್ರಯಾಣಿಕನೊಬ್ಬಬಾಂಬ್ ಇಡಲಾಗಿದೆ ಎಂದು ರೈಲ್ವೆ ಕಂಟ್ರೋಲ್ ರೂಮ್ ಗೆ ಬೆದರಿಕೆ ಕರೆ ಮಾಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಈ ಹಿನ್ನೆಲೆಯಲ್ಲಿ ಹೊಸದಿಲ್ಲಿ-ಬೆಂಗಳೂರು ಕರ್ನಾಟಕ ಎಕ್ಸ್ ಪ್ರೆಸ್ ರೈಲನ್ನು ಇಂದು (ಮೇ 11) ಮುಂಜಾನೆ ವಾಡಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿ 4 ಗಂಟೆಗಳ ಕಾಲ ತಪಾಸಣೆಗೊಳಪಡಿಸಲಾಯಿತು.

ಬಾಂಬ್ ನಿಷ್ಕ್ರಿಯ ದಳದ ಡಾಗ್ ಸಿಬ್ಬಂದಿ ಪ್ರಯಾಣಿಕರನ್ನು ಕೆಳಗಿಳಿಸಿ ರೈಲಿನ 22 ಬೋಗಿಗಳನ್ನು ತಪಾಸಣೆ ಮಾಡಿದರು. ಬಳಿಕ ಅದೊಂದು ಹುಸಿಬಾಂಬ್ ಕರೆ ಎಂಬುದು ದೃಢಪಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಇದೀಗ ಕಲಬುರ್ಗಿಯ ವಾಡಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ ಮೂಲದ ದೀಪಸಿಂಗ್ ರಾಥೋಡ್ (33) ಬಂಧಿತ ಆರೋಪಿ.

ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವಾಡಿ ರೈಲ್ವೆ ಪೊಲೀಸ್ ಠಾಣೆಯ ಪಿಎಸ್ಸೈ ವೀರಭದ್ರಪ್ಪ ಎಚ್.ಎಸ್. ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!