ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳವಾರ ತಡರಾತ್ರಿ ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ.
ಬಂದರು ನಗರದಲ್ಲಿ ಲ್ಯಾಂಡಿಂಗ್ ಆದ ಬಳಿಕ ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಅದು ಸುಳ್ಳು ಎಂಬುದು ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ ಸಂದೇಶ ನೀಡಿತ್ತು ಎಂದು ವಿಶಾಖಪಟ್ಟಣಂ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ರಾಜಾ ರೆಡ್ಡಿ ತಿಳಿಸಿದ್ದಾರೆ.
ವಿಮಾನ ಸುರಕ್ಷಿತವಾಗಿ ಬಂದಿಳಿದಿದ್ದು, ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ಇದು ಸುಳ್ಳು ಕರೆ ಎಂದು ಕಂಡುಬಂದಿದೆ ಎಂದು ರೆಡ್ಡಿ ಹೇಳಿದರು, ವೈಜಾಗ್‌ಗೆ ತೆರಳುತ್ತಿದ್ದ ವಿಮಾನದಲ್ಲಿ 107 ಪ್ರಯಾಣಿಕರಿದ್ದರು ಎನ್ನಲಾಗಿದೆ. ವಿಮಾನದಿಂದ ಪ್ರಯಾಣಿಕರನ್ನು ಇಳಿಸಿದ ನಂತರ ಮತ್ತು ಅದನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ನಿರ್ದೇಶಕರು ಮಾಹಿತಿ ನೀಡಿದ್ದಾರೆ.