ನಕಲಿ ಕ್ಯಾನ್ಸರ್‌ನ ಜೀವರಕ್ಷಕ ಔಷಧಿ ದಂಧೆ: ಎಂಜಿನಿಯರ್, ವೈದ್ಯರು, ಎಂಬಿಎ ಪದವಿಧರು ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕ್ಯಾನ್ಸರ್‌ನ ಜೀವರಕ್ಷಕ’ ಔಷಧಿಗಳನ್ನು ನಕಲಿಯಾಗಿ ತಯಾರಿಸುತ್ತಿದ್ದ ದಂಧೆಯನ್ನು ದಿಲ್ಲಿ ಅಪರಾಧ ವಿಭಾಗದ ಅಧಿಕಾರಿಗಳು ಮಟ್ಟಹಾಕಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಎಂಜಿನಿಯರ್‌ಗಳು, ವೈದ್ಯರು ಮತ್ತು ಎಂಬಿಎ ಪದವಿಧರರನ್ನು ಬಂಧಿಸಲಾಗಿದೆ. ಘಟನೆ ಸಂಬಂಧಿಸಿ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆಬೀಸಿದ್ದಾರೆ. ಬಂಧಿತರಿಂದ ಬರೋಬ್ಬರಿ 8 ಕೋಟಿ ರೂ. ಮೌಲ್ಯದ ನಕಲಿ ಔಷಧ ಜಪ್ತಿ ಮಾಡಿದೆ ಎಂದು ಅಪರಾಧ ವಿಭಾಗದ ವಿಶೇಷ ಪೊಲೀಸ್ ಕಮಿಷನರ್ ಆರ್.ಎಸ್ ಯಾದವ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!