ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಯೋಗಿ ಸರಕಾರದಿಂದ ನಕಲಿ ಎನ್​​ಕೌಂಟರ್: ಅಖಿಲೇಶ್ ಯಾದವ್ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :
 
ಗ್ಯಾಂಗ್​​ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್ ಅವರ ಪುತ್ರ ಮತ್ತು ಆತನ ಸಹಚರನನ್ನು ಇಂದು ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿದ್ದು , ಇದರ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ನಕಲಿ ಎನ್‌ಕೌಂಟರ್ (Fake Encounter) ನಡೆಸಿದೆ ಆರೋಪಿಸಿದ್ದಾರೆ.

ಉತ್ತರ ಪ್ರದೇಶವನ್ನು (Uttar Pradesh) ಕಾಡುತ್ತಿರುವ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆಡಳಿತ ಪಕ್ಷ ನಕಲಿ ಎನ್‌ಕೌಂಟರ್‌ಗಳ ಮೂಲಕ
ಯತ್ನಿಸುತ್ತಿದೆ. ಬಿಜೆಪಿ ಸರ್ಕಾರಕ್ಕೆ ನ್ಯಾಯಾಲಯಗಳಲ್ಲಿ ನಂಬಿಕೆಯಿಲ್ಲ. ಅದು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುತ್ತಿದೆ. ಅಧಿಕಾರದಲ್ಲಿರುವವರು ಯಾರು ಸರಿ ಅಥವಾ ತಪ್ಪು ಎಂದು ತೀರ್ಪು ನೀಡುವುದು ಮತ್ತು ಯಾರು ಬದುಕಬೇಕು ಅಥವಾ ಸಾಯಬೇಕು ಎಂದು ನಿರ್ಧರಿಸುವುದು ಸರಿಯಲ್ಲ ಎಂದಿದ್ದಾರೆ.

ಬಿಜೆಪಿಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಮತ್ತು ಅಪರಾಧಿಗಳನ್ನು ಬಿಡಬಾರದು. ಅಧಿಕಾರದಲ್ಲಿರುವವರಿಗೆ ಯಾವುದು ಸರಿ ಅಥವಾ ತಪ್ಪು ಎಂದು ನಿರ್ಧರಿಸುವ ಹಕ್ಕಿಲ್ಲ. ಬಿಜೆಪಿ ಸಾಮರಸ್ಯಕ್ಕೆ ವಿರುದ್ಧವಾಗಿದೆ ಎಂದು ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!