ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಎಸ್. ಸುರೇಶ್ ಕುಮಾರ್ ಹೆಸರಲ್ಲಿ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.
ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಲಾಗಿದ್ದು, ಉತ್ತರ ಪ್ರದೇಶದ ಮೂಲದವರು ಎಂದು ಹೇಳಲಾಗಿದೆ. ಅಲ್ಲದೆ ನಕಲಿ ಫೇಸ್ ಬುಕ್ ಖಾತೆಯಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂಬುದು ಗಮನಕ್ಕೆ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ವಂಚಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.