ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ: ಕೈ ಮುಖಂಡರ ವಿರುದ್ಧ ಅವಹೇಳನಕಾರಿ ಪೋಸ್ಟ್‌

ಹೊಸದಿಗಂತ ಬೆಂಗಳೂರು:

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಯತೀಂದ್ರ ಸಿದ್ದರಾಮಯ್ಯ ಹೆಸರಿನ ನಕಲಿ ಖಾತೆ ತೆರೆದು ಕಾಂಗ್ರೆಸ್ ನಾಯಕರನ್ನು ಅಶ್ಲೀಲವಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ.

ಈ ಸಂಬಂಧ ಜಾಲಹಳ್ಳಿ ಠಾಣೆ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಯಶವಂತಪುರದ ಕಾಂಗ್ರೆಸ್ ಮುಖಂಡ ಶಶಾಂಕ್ ಗೌಡ ಎಂಬವರು ದೂರು ನೀಡಿದ್ದು, ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಹೆಸರಿನಲ್ಲಿ ಫೇಸ್‌ಬುಕ್ ಖಾತೆ ತೆರೆದಿರುವ ದುಷ್ಕರ್ಮಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕುಸಮಾ ಹನುಮಂತರಾಯಪ್ಪ ಅವರ ಪೋಟೋಗಳನ್ನು ಬಳಸಿಕೊಂಡು ಅಶ್ಲೀಲ ಪದಗಳಿಂದ ಪೋಸ್ಟ್ ಮಾಡಿದ್ದಾರೆ.

ಅಲ್ಲದೆ, ಪೋಸ್ಟ್‌ಗಳಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರ ಕಾರ್ಟೂನ್ ಚಿತ್ರ ಬಳಸಿದ್ದಾರೆ. ಈ ಸಂಬಂಧ ಈ ರೀತಿಯ ಪೋಸ್ಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಶಶಾಂಕ್‌ಗೌಡ ದೂರು ನೀಡಿದ್ದಾರೆ. ಇದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!