ನಕಲಿ ಚಿನ್ನದ ಕೇಸ್: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಗರಣ ಪ್ರಕರಣದಲ್ಲಿ ಬ್ಯಾಂಕ್‍ನ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆ(ಏಪ್ರಿಲ್ 08) ಡಿಸಿಸಿ  ಅಧ್ಯಕ್ಷ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ಸಹ ನಡೆಸಿದ್ದರು. ಬಳಿಕ ಇಡಿ, ಮಂಜುನಾಥ್ ಗೌಡ ಅವರನ್ನು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್​, ಮಂಜುನಾಥ ಗೌಡ ಅವರನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ

ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಕಲಿ ಚಿನ್ನ ಅಡವಿಟ್ಟು ಕೋಟ್ಯಾಂತರ ರೂ ವಂಚನೆ ನಡೆದಿತ್ತು. 2014ರಲ್ಲಿ ಈ ಹಗರಣ ನಡೆದಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು 2014ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಬಳಿಕ ಇಡಿ ಸಹ ಇಸಿಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡು ಮಂಜುನಾಥ್ ಗೌಡಗೆ ಸಮನ್ಸ್ ಜಾರಿಗೊಳಿಸಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಮಂಜುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನ ಇತ್ತೀಚೆಗೆ ಹೈಕೋರ್ಟ್​ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಇಡಿ ಮಂಜುನಾಥ್​ ಗೌಡ ಅವರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಬಳಿಕ ನಿನ್ನೆ(ಏಪ್ರಿಲ್ 08) ಬೆಂಗಳೂರಿನಲ್ಲಿ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಸಿದ್ದರು. ಆದ್ರೆ, ಇದೀಗ ಮಂಜುನಾಥ್ ಅವರನ್ನು ಇಡಿ ಬಂಧಿಸಿ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!