spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಕಲಿ ಬಂಗಾರ ಕೊಟ್ಟು ಬಟ್ಟೆ ವ್ಯಾಪಾರಿಗೆ ವಂಚನೆ: ಮೂವರು ಆರೋಪಿಗಳ ಬಂಧನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ದಾವಣಗೆರೆ:

ಬಂಗಾರದ ಬಿಲ್ಲೆ ಎಂಬುದಾಗಿ ನಂಬಿಸಿ, ನಕಲಿ ಬಂಗಾರ ಕೊಟ್ಟು ಬಟ್ಟೆ ವ್ಯಾಪಾರಿಗೆ 5 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಹೊನ್ನಾಳಿಯ ಬಟ್ಟೆ ವ್ಯಾಪಾರಿ ನರಪತ್ ಸಿಂಗ್ ಎಂಬುವರ ಅಂಗಡಿಗೆ ಬಂದಿದ್ದ ಮೂರು ಜನರು ದಾವಣಗೆರೆಯಲ್ಲಿ ಪೈಪ್‌ಲೈನ್ ಕೆಲಸ ಮಾಡುವಾಗ ಗಡಿಗೆಯೊಂದರಲ್ಲಿ ಬಂಗಾರದ ಬಿಲ್ಲೆಗಳು ಸಿಕ್ಕಿದ್ದು, ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿದ್ದರು.
ವ್ಯಾಪಾರಿಯನ್ನು ದಾವಣಗೆರೆಗೆ ಕರೆಸಿ ಒಂದು ಕೆಜಿ ನಕಲಿ ಬಂಗಾರದ ಬಿಲ್ಲೆ ಕೊಟ್ಟು ಐದು ಲಕ್ಷ ರೂ. ಹಣ ಪಡೆದಿದ್ದರು. ಬಿಲ್ಲೆಗಳು ನಕಲಿ ಎಂಬುದು ಗೊತ್ತಾಗುತ್ತಿದ್ದಂತೆ ನರಪತ್
ಸಿಂಗ್ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾರ್ಯಪ್ರವೃತ್ತರಾದ ಪೊಲೀಸರ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ
ರಾಜ್ಯದ ಮೂರು ಜನರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ನಾಲ್ಕು ಲಕ್ಷ ರೂ. ನಗದು ಹಣ, ಒಂದು ಕೆಜಿ ನಕಲಿ ಬಂಗಾರದ ಬಿಲ್ಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪತ್ತೆ
ಕಾರ್ಯದಲ್ಲಿ ನಗರ ಡಿವೈಎಸ್ಪಿ ನಾಗೇಶ ಯು.ಐತಾಳ್, ಸಿಪಿಐ ಗುರುಬಸವರಾಜ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆ ಪಿಎಸೈಗಳಾದ ಅಬ್ದುಲ್ ಖಾದರ್ ಜಿಲಾನಿ, ಪ್ರಭು ಡಿ.ಕೆಳಗಿನಮನೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss