Saturday, April 1, 2023

Latest Posts

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್: ಸೈಬರ್ ಕ್ರಿಮಿನಲ್ ಗಳಿಂದ ಹಣಕ್ಕೆ ಬೇಡಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಹಿಮಾಚಲ ಪ್ರದೇಶ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆಯಿಟ್ಟ ಘಟನೆ ನಡೆದಿದೆ.

ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದು, ನನ್ನ ಹೆಸರಿನಲ್ಲಿ ಸೃಷ್ಟಿಸಲಾದ ನಕಲಿ ಖಾತೆಯನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆಯಿಡುತ್ತಿದ್ದಾರೆ. ಜನ ಜಾಗೃತರಾಗಬೇಕು ಮತ್ತು ಅವರ ಬೇಡಿಕೆ ಸ್ಪಂದಿಸಬೇಡಿ ಎಂದು ಅರ್ಲೇಕರ್ ಅವರು ಸೋಮವಾರ ಮನವಿ ಮಾಡಿದ್ದಾರೆ.

ಔಪಚಾರಿಕ ದೂರು ದಾಖಲಿಸಿದ ನಂತರ ಖಾತೆಯನ್ನು ನಿಷ್ಕ್ರಿಯಗೊಳಿಸುವಂತೆ ಹಿಮಾಚಲ ಪ್ರದೇಶ ಪೊಲೀಸರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಳೆದ ವರ್ಷ, ಶಂಕಿತ ಸೈಬರ್ ಕ್ರಿಮಿನಲ್ಗಳು ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪದಲ್ಲಿ ಹಣ ಪಡೆಯಲು ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯಂತಹ ಹಿರಿಯ ನಾಯಕರು ಹಾಗೂ ಅಧಿಕಾರಿಗಳನ್ನು ಯಾಮಾರಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!