ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.