Saturday, November 15, 2025

ಸಿಲಿಕಾನ್ ಸಿಟಿಯಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ: 1.5 ಕೋಟಿ ಮೌಲ್ಯದ ತುಪ್ಪ ಸೀಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಪೊಲೀಸರು 1.5 ಕೋಟಿ ರೂ. ಮೌಲ್ಯದ 8 ಸಾವಿರ ಲೀಟರ್ ತುಪ್ಪವನ್ನು ಸೀಜ್ ಮಾಡಿದ್ದಾರೆ.

ಈ ಸಂಬಂಧ ಕೆಎಂಎಫ್ (KMF) ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಸಪ್ಲೈರ್‌ಗಳಾದ ಮುನಿರಾಜು ಹಾಗೂ ಅಭಿ ಅರಸು ಎಂಬ ನಾಲ್ವರ ಗ್ಯಾಂಗ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿದ್ದ ನಂದಿನಿ ಪಾರ್ಲರ್‌ಗಳಿಗೆ ನಕಲಿ ತುಪ್ಪವನ್ನು ಸರಬರಾಜು ಮಾಡುತ್ತಿದ್ದರು. ಹೊರ ರಾಜ್ಯದಲ್ಲಿ ಕಲಬೆರಕೆ ತುಪ್ಪವನ್ನು ತಯಾರಿಸಿ, ಪ್ಯಾಕೆಟ್ ಹಾಗೂ ಪ್ಲ್ಯಾಸ್ಟಿಕ್‌ ಬಾಟಲ್‌ನಲ್ಲಿ ಸಪ್ಲೈ ಮಾಡುತ್ತಿದ್ದರು.

ಓರ್ವ ತಯಾರಿಸಿದ ತುಪ್ಪವನ್ನು ತಮಿಳುನಾಡಿನಿಂದ ಸಪ್ಲೈ ಮಾಡಿದರೆ, ಇನ್ನೋರ್ವ ಅದನ್ನು ಬೆಂಗಳೂರಿಗೆ ಕಳುಹಿಸುತ್ತಿದ್ದ. ಈ ಜಾಲದಲ್ಲಿ ಕೆಎಂಎಫ್ ಡಿಸ್ಟ್ರಿಬ್ಯೂಟರ್ ಹಾಗೂ ಅವರ ಪುತ್ರ ಕೂಡ ಭಾಗಿಯಾಗಿರುವುದು ತಿಳಿದುಬಂದಿದೆ.

ಸದ್ಯ ಪೊಲೀಸರುಬರೋಬ್ಬರಿ 1.50 ಕೋಟಿ ರೂ. ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪವನ್ನು ಜಪ್ತಿ ಮಾಡಿದ್ದಾರೆ.

error: Content is protected !!