ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳತನದ ಸುಳ್ಳು ಸುದ್ದಿ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ಉಡುಪಿ ಎಸ್ಪಿ

ಹೊಸದಿಗಂತ ವರದಿ,ಉಡುಪಿ:

ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಸುದ್ದಿಗಳನ್ನು ಹರಡುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದೆಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದ್ದಾರೆ.

ಗುರುವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶದ/ರಾಜ್ಯದ ವಿಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿರುತ್ತದೆ.

ಸಾರ್ವಜನಿಕರಿಗೆ ತಮ್ಮ ನಗರ, ಗ್ರಾಮ ಸುತ್ತುಮುತ್ತಲಿನ ಪುದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ, ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕುಶವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!