May 11, 2026
Monday, May 11, 2026
spot_img

NIA, ED ಅಧಿಕಾರಿಗಳಂತೆ ನಟಿಸಿ ಡಿಜಿಟಲ್ ಅರೆಸ್ಟ್: 2 ಕೋಟಿ ರೂ. ಕಳೆದುಕೊಂಡ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೈಬರ್ ವಂಚಕರು ಹೊಸಹೊಸ ತಂತ್ರಗಳನ್ನು ಬಳಸಿಕೊಂಡು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಮುಂದುವರಿದಿವೆ. ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 61 ವರ್ಷದ ವ್ಯಕ್ತಿಯೊಬ್ಬರನ್ನು ಬೆದರಿಸಿ 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

‘ನ್ಯಾಷನಲ್ ಡೇಟಾ ಪ್ರೊಟೆಕ್ಷನ್ ಸೆಂಟರ್’ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿ, ಸಂತ್ರಸ್ತರ ಗುರುತಿನ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು ಸಿಮ್ ಕಾರ್ಡ್ ಪಡೆದಿದ್ದು, ಅದನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಲಾಗಿದೆ ಎಂದು ನಂಬಿಸಿದ್ದಾನೆ ಎನ್ನಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಹಲವು ಎಫ್‌ಐಆರ್ ದಾಖಲಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ ಎಂದು ಭಯ ಹುಟ್ಟಿಸಿದ್ದಾರೆ.

ಇದನ್ನೂ ಓದಿ:

ಬಳಿಕ NIA ಮತ್ತು ED ಅಧಿಕಾರಿಗಳಂತೆ ನಟಿಸಿದ ವಂಚಕರು, ಪ್ರಕರಣದಿಂದ ಪಾರಾಗಲು ಹಣ ಪಾವತಿಸಬೇಕೆಂದು ಒತ್ತಡ ಹೇರಿದ್ದಾರೆ. ಪರಿಶೀಲನೆ ಹಾಗೂ ಪ್ರಕರಣ ಕ್ಲಿಯರೆನ್ಸ್ ಹೆಸರಿನಲ್ಲಿ ಹಂತ ಹಂತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

ಏಪ್ರಿಲ್ 7ರಿಂದ 18ರವರೆಗೆ ಸಂತ್ರಸ್ತರು ವಿವಿಧ ಖಾತೆಗಳಿಗೆ ಒಟ್ಟು 2.07 ಕೋಟಿ ರೂ. ವರ್ಗಾಯಿಸಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಪ್ರಕರಣ ದಾಖಲಾಗಿದ್ದು, ವಂಚಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !