ಹೊಸದಿಗಂತ, ಮಡಿಕೇರಿ:
ತಹಶೀಲ್ದಾರರ ನಕಲಿ ಸಹಿ ಮಾಡಿ ಬಿಲ್ ಹಣ ಪಡೆಯಲು ಯತ್ನಿಸಿದ ಆರೋಪ ಎದುರಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಮಡಿಕೇರಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಪ್ರಜ್ವಲ್ (42) ಭಾನುವಾರ ಬೆಳಗಿನ ಜಾವ ಸಾವಿಗೀಡಾಗಿದ್ದಾರೆ.
ಮಡಿಕೇರಿ ತಹಶೀಲ್ದಾರ್ ಪ್ರವೀಣ್ ಅವರ ನಕಲಿ ಸಹಿ ಮಾಡಿದ ಪ್ರಜ್ವಲ್, ಬಿಲ್ ಹಣಕ್ಕಾಗಿ ಖಜಾನೆಗೆ ಕಳುಹಿಸಿದ್ದರೆನ್ನಲಾಗಿದೆ. ಸಂಶಯಗೊಂಡ ಖಜಾನೆಯ ಅಧಿಕಾರಿಗಳು ಪರಿಶೀಲಿಸಿದಾಗ ಪ್ರವೀಣ್ ಅವರ ನಕಲಿ ಸಹಿ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಬಯಲುಗೊಂಡ ಹಿನ್ನಲೆಯಲ್ಲಿ ಮಂಗಳವಾರ ರಾತ್ರಿ ಪ್ರಜ್ವಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಭಾನುವಾರ ಬೆಳಗಿನ ಜಾವ ಸಾವಿಗೀಡಾಗಿದ್ದು, ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ