ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಸೋಷಿಯಲ್ ಮೀಡಿಯಾಗಳು ಜನರ ಪಾಲಿಗೆ ಕಂಟಕಗಳಾಗುತ್ತಿವೆ ಎಂಬ ಗಂಭೀರ ಆರೋಪದ ನಡುವೆಯೇ, ಫೇಸ್ಬುಕ್ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು ಕೊರೋನಾ ವೈರಾಣು ಮತ್ತು ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹರಡಿ ಜನರನ್ನು ಕೊಲ್ಲುತ್ತಿವೆ ಎಂಬುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಇಲ್ಲಿನ ಶ್ವೇತಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೊರೋನಾ ವೈರಾಣು ಮತ್ತು ಅದನ್ನು ತಡೆಗಟ್ಟುವ ಲಸಿಕೆಗಳ ಸುರಕ್ಷತೆ ಬಗ್ಗೆ ಫೇಸ್ಬುಕ್ನಂತಹ ಸಾಮಾಜಿಕ ಮಾಧ್ಯಮಗಳು ನಿರಂತರ ಸುಳ್ಳು ಸುದ್ದಿ ಹರಡುವ ಮೂಲಕ ಜನರನ್ನು ಕೊಲ್ಲುತ್ತಿವೆ ಎಂದು ಕಿಡಿಕಾರಿದರು.
ಲಸಿಕೆ ಪಡೆಯದವರಲ್ಲಿ ಮಾತ್ರ ಸಾಂಕ್ರಾಮಿಕ ಇರುವುದಾಗಿ ಹೇಳುವ ಮೂಲಕ ಸಾಮಾಜಿಕ ಮಾಧ್ಯಮಗಳು ಜನರನ್ನು ಕೊಲ್ಲುತ್ತಿವೆ.ಕೋವಿಡ್-19ರ ಕುರಿತಂತೆ ಸುಳ್ಳು ಸುದ್ದಿ ಹರಡುವಿಕೆ ನಿಲ್ಲಿಸುವಲ್ಲಿ ಫೇಸ್ಬುಕ್ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ಅವರು ಕೂಡಾ ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.