ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇರಳದ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಅಧಿಕಾರಿಯ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಕ್ರೈಂ ಬ್ರಾಂಚ್ ಪೊಲೀಸರು, ಇಂದು ಆನ್ಲೈನ್ ಮೂಲಕ ಕೋರ್ಟ್ಗೆ ಹಾಜರು ಪಡಿಸಿ ಕಸ್ಟಡಿಗೆ ಪಡೆದಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ಸ್ವಪ್ನಾ ಸುರೇಶ್ , ಏರ್ ಇಂಡಿಯಾ ಅಧಿಕಾರಿ ಎಲ್.ಎಸ್. ಸಿಬು ಅವರ ಪ್ರಕರಣದ ತನಿಖೆ ನಡೆಸುತ್ತಿದ್ದ ಅಪರಾಧ ವಿಭಾಗದ ಪೊಲೀಸರು ಇಂದು ಆನ್ಲೈನ್ನಲ್ಲಿಯೇ ಕೋರ್ಟ್ಗೆ ಸ್ವಪ್ನಾ ಸುರೇಶ್ ಅವರನ್ನು ಹಾಜರು ಪಡಿಸಿದ್ದಾರೆ.
ಈ ಸಂಬಂಧ ಕೋರ್ಟ್ ವಿಚಾರಣೆ ನಡೆಸಿ, ನಕಲಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮೇ 22ರವರೆಗೆ ಸ್ವಪ್ನಾ ಅವರನ್ನು ಕ್ರೈಂ ಬ್ರ್ಯಾಂಚ್ ಕಸ್ಟಡಿಗೆ ವಹಿಸಿದೆ.