Saturday, April 1, 2023

Latest Posts

ಕೌಟುಂಬಿಕ ಕಲಹ: ಮೂರು ಮಕ್ಕಳೊಂದಿಗೆ ಸಂಪ್‌ಗೆ ಜಿಗಿದು ತಾಯಿ ಆತ್ಮಹತ್ಯೆ

ಹೊಸದಿಗಂತ ವರದಿ ವಿಜಯಪುರ:

ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳೊಂದಿಗೆ ನೀರಿನ ಸಂಪ್‌ಗೆ ಜಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಇಲ್ಲಿನ ಗೀತಾ ರಾಮು ಚವ್ಹಾಣ (32), ಸೃಷ್ಟಿ (6) ಸಮರ್ಥ (4) ಕಿಶನ್ (3) ಮೃತ ದುರ್ದೈವಿಗಳು

ಪತಿ ರಾಮು ಜೊತೆಗೆ ಪತ್ನಿ ಗೀತಾ ಜಗಳ ಮಾಡಿದ್ದು, ಪತಿ ಮಲಗಿದ್ದ ವೇಳೆ ಮೂವರು‌ ಮಕ್ಕಳನ್ನು ನೀರಿನ‌ ಸಂಪ್‌ಗೆ ಎಸೆದು, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ತಿಕೋಟಾ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!