Tuesday, September 16, 2025

ಲವ್‌ ಮ್ಯಾರೇಜ್‌ಗೆ ಒಪ್ಪದ ಕುಟುಂಬ: ವಿಷ ಕುಡಿದ ಮೂವರು ಯುವತಿಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಯಚೂರಿನಲ್ಲಿ ಒಂದೇ ಮನೆಯ ಮೂವರು ಯುವತಿಯರು ವಿಷ ಕುಡಿದಿದ್ದಾರೆ. ಮನೆಯಲ್ಲಿ ಪ್ರೀತಿಗೆ ಒಪ್ಪಿಗೆ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ವಿಷ ಕುಡಿದಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಮನೆಯ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ನಿಗೂಢವಾಗಿದ್ದ ಕಾರಣ ಬಯಲಾಗಿದೆ. ಯುವತಿಯರು ತಾವು ಪ್ರೀತಿಸಿದವರನ್ನು ಮದುವೆಯಾಗಲು ಮನೆಯಲ್ಲಿ ಒಪ್ಪುವುದಿಲ್ಲ‌ ಎಂದು ಒಟ್ಟಾಗಿ ಆತ್ಮಹತ್ಯೆಗೆ ಯತ್ನಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಗ್ರಾಮದ ಒಂದೇ ಮನೆಯ ಮೂವರು ಯುವತಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ರಿಮಿನಾಶಕ ಸೇವಿಸಿ ಬಳಿಕ ಬಾವಿಗೆ ಹಾರಿದ್ದ ಇಬ್ಬರು ಯುವತಿಯರಲ್ಲಿ ರೇಣುಕಾ (17) ಸಾವನ್ನಪ್ಪಿದ್ದಾಳೆ. ಹತ್ತಿ ಹೊಲಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಮೂವರು ಯುವತಿಯರು ಕ್ರಿಮಿನಾಶಕ ಸೇವಿಸಿದ್ದರು. ಇನ್ನೂ ಹದಿನೈದೇ ದಿನದಲ್ಲಿ ರೇಣುಕಾ ನಿಶ್ಚಿತಾರ್ಥ ಮಾಡಲು ನಿರ್ಧರಿಸಲಾಗಿತ್ತು ಎಂದು ತಿಳಿದು ಬಂದಿದೆ. 

ಇನ್ನೋರ್ವ ಯುವತಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾಳೆ. ಕ್ರಿಮಿನಾಶಕ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡಿರುವ ಮತ್ತೋರ್ವ ಯುವತಿಯ ಪರಿಸ್ಥಿತಿ ಗಂಭೀರವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮೂವರು ಯುವತಿಯರು ಸಂಬಂಧಿಕರಾದ್ರೂ ಸ್ನೇಹಿತೆಯರಂತೆ ಬಹಳ ಅನ್ಯೋನ್ಯವಾಗಿದ್ದರು.

ಇದನ್ನೂ ಓದಿ