March 7, 2026
Saturday, March 7, 2026
spot_img

ಕೌಟುಂಬಿಕ ವ್ಯಾಜ್ಯ: ನಟಿ ಕಾವ್ಯ ಗೌಡ ದಂಪತಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕಿರುತೆರೆ ನಟಿ ಕಾವ್ಯ ಗೌಡ ಮತ್ತು ಅವರ ಪತಿ ಸೋಮಶೇಖ‌ರ್ ವಿರುದ್ಧದ ಕೌಟುಂಬಿಕ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ನಟಿ ಕಾವ್ಯ ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿ, ಪೊಲೀಸರು ಹಾಗೂ ಪ್ರತಿವಾದಿಗಳಿಗೆ ನೊಟೀಸ್ ಜಾರಿಗೊಳಿಸಿದೆ.

ಸೋಮಶೇಖರ್ ಮತ್ತು ನಂದೀಶ್ ಇಬ್ಬರು ಸಹೋದರರು ತಮ್ಮ ಪತ್ನಿಯರೊಂದಿಗೆ ಒಂದೇ ಮನೆಯಲ್ಲಿ ವಾಸವಿದ್ದು, ಕುಟುಂಬದ ಸದಸ್ಯರ ನಡುವೆ ಗಲಾಟೆ ಸಂಭವಿಸಿದ್ದು, ಇದು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗುವ ಮೂಲಕ ಕಾನೂನು ಸಮರಕ್ಕೆ ಕಾರಣವಾಗಿತ್ತು. ಈ ಸಂಬಂಧ ಒಟ್ಟು ಎಂಟು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !