ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ಕುಟುಂಬ ಕಲಹದ ಹಿನ್ನಲೆ ಭಾರತೀಯ ಸೇನೆಯ ಯೋಧ ವಿನು ಕಾರ್ಯಪ್ಪ, ತನ್ನ ಪತ್ನಿ ದೀಪಿಕಾ ದೇಚಮ್ಮ (32) ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ದೀಪಿಕಾ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಸಮಯದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರಾಥಮಿಕ ತನಿಖೆಯಂತೆ ಕುಟುಂಬ ಕಲಹವೇ ಈ ದುರಂತಕ್ಕೆ ಕಾರಣವಾಗಿದೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರ ಶೋಧ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.
ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತ್ತೆಗೆ ಪೊಲೀಸರು ಬಲೇ ಬಿಸಿದ್ದಾರೆ. ಈ ಘಟನೆ ಸ್ಥಳೀಯ ಸಮುದಾಯದಲ್ಲಿ ಭಯ ಮತ್ತು ಆತಂಕ ಸೃಷ್ಟಿಸಿದೆ.