Sunday, January 11, 2026

ಕೌಟುಂಬಿಕ ಕಲಹಕ್ಕೆ ಹರಿಯಿತು ನೆತ್ತರು: ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ!

ಹೊಸದಿಗಂತ ಕಿತ್ತೂರು:

ಣಿಕ ಆವೇಶವೋ ಅಥವಾ ಕೌಟುಂಬಿಕ ಕಲಹವೋ, ಒಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರಕರಶೀಗಿಹಳ್ಳಿ ಗ್ರಾಮದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಗ್ರಾಮದ ನಿವಾಸಿಯಾದ ಶಿವಪ್ಪ ಸಣ್ಣಬಸಪ್ಪ ಕಂಬಳಿ (50) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಈತ ತನ್ನ ಪತ್ನಿ ಯಲ್ಲವ್ವ ಶಿವಪ್ಪ ಕಂಬಳಿ (45) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ಶಿವಪ್ಪ, ನಂತರ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶುಕ್ರವಾರ ಮುಂಜಾನೆ ಮನೆಯಲ್ಲಿ ದಂಪತಿಗಳಿಬ್ಬರೂ ಹೆಣವಾಗಿ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕಿತ್ತೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹತ್ಯೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

error: Content is protected !!