ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆಗೆ ಶರಣು

ಹೊಸದಿಗಂತ ವರದಿ ಹಾಸನ:

ಕೌಟುಂಬಿಕ ಕಲಹದಿಂದಾಗಿ ತಾಯಿ ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ, ಕಬ್ಬಳಿ ಗ್ರಾಮದಲ್ಲಿ ನಡೆದಿದೆ.

ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ.

ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು, ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿದ್ದ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ನಡೆಯುತ್ತಿದ್ದ ಕಾರಣಕ್ಕೆ ಗೀತಾ ಮನೆ ಬಿಟ್ಟು ಹೋಗಿದ್ದಳು. ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿ ಎರಡು ಬಾರಿ ರಾಜಿ-ಪಂಚಾಯ್ತಿ ಮಾಡಿದ್ದರು ಸಹ ಗೀತಾ ಗಂಡನ ಜೊತೆ ಇರದೆ ತವರು ಮನೆ ಸೇರಿದ್ದಳು. ಇದರಿಂದ ಮನನೊಂದಿದ್ದ ತಾಯಿ-ಮಗ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!