Thursday, August 18, 2022

Latest Posts

ಕೌಟುಂಬಿಕ ಕಲಹ: ಕೆರೆಗೆ ಹಾರಿ ಅಕ್ಕ-ತಂಗಿ ಆತ್ಮಹತ್ಯೆ

ಹೊಸ ದಿಗಂತ ವರದಿ, ಮಡಿಕೇರಿ:

ವಿದ್ಯಾರ್ಥಿನಿಯರಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ನಾಮೇರ ಉದಯ ಎಂಬವರ ಪುತ್ರಿಯರಾದ ದಮಯಂತಿ(20) ಹಾಗೂ ಹರ್ಷಿತಾ(18) ಮೃತ ಅಕ್ಕ ತಂಗಿಯರು.
ದಮಯಂತಿ ಪೊನ್ನಂಪೇಟೆಯ ಸಿಇಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಹರ್ಷಿತಾ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ಬಿ .ಎ. ವಿದ್ಯಾರ್ಥಿನಿ.
ಮನೆಯಲ್ಲಿ ನಡೆಯುತ್ತಿದ್ದ ಕಲಹದಿಂದ ಬೇಸತ್ತು ಈ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವುದಾಗಿ ಹೇಳಲಾಗಿದೆ.
ಭಾನುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!