Friday, September 22, 2023

Latest Posts

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ಮತ್ತು ಮಾಜಿ ಸಂಸದೆ ಜಯಪ್ರದಾ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ಚೆನ್ನೈನ ಎಗ್ಮೋರ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಜಯಪ್ರದಾ ನಡೆಸುತ್ತಿರುವ ಚಿತ್ರಮಂದಿರದಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ಇಎಸ್‌ಐ ಹಣ ಪಾವತಿಸಿಲ್ಲ ಎಂದು ಕಾರ್ಮಿಕರು ರಾಜ್ಯ ವಿಮಾ ನಿಗಮಕ್ಕೆ ದೂರು ನೀಡಿದ್ದರು.

ಈ ಪ್ರಕರಣವನ್ನು ವಜಾಗೊಳಿಸಲು ಕೋರಿ ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಪರಿಶೀಲಿಸಿದ ಚೆನ್ನೈ ಎಗ್ಮೋರ್ ಕೋರ್ಟ್, ಜಯಪ್ರದಾ ಸೇರಿದಂತೆ ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ ಐದು ಸಾವಿರ ದಂಡ ವಿಧಿಸಿ ಶಿಕ್ಷೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!