ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಈ ಕುರಿತು ಅವರ ಕುಟುಂಬದವರು ಮಾಹಿತಿ ನೀಡಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತದ ಕಾರ್ಟೂನ್ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ. ರಾಜಕೀಯ ಕುರಿತ ವ್ಯಂಗ್ಯಚಿತ್ರಗಳ ರಚನೆಯಿಂದಾಗಿ ಹೆಚ್ಚು ಪ್ರಸಿದ್ಧಿ ಪಡೆದಿದ್ದರು.
ಅಜಿತ್ ನಿನನ್ ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.