Thursday, March 23, 2023

Latest Posts

SHOCKING | ಮಲಯಾಳಂನ ಖ್ಯಾತ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲಯಾಳಂ ಚಿತ್ರರಂಗದ ನಟಿ, ನಿರೂಪಕಿ ಸುಬಿ ಸುರೇಶ್ ಅವರು ಕೊನೆಯುಸಿರೆಳೆದಿದ್ದಾರೆ.
ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಸುಬಿ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಬಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಿರುತೆರೆಯಲ್ಲಿ ಮನ್ನಣೆ ಪಡೆದಿದ್ದ ಸುಬಿ ಅವರು ಹಾಸ್ಯ ಪಾತ್ರಗಳ ಮೂಲಕ ಜನರನ್ನು ಮನರಂಜಿಸಿದ್ದರು. ಸುಬಿ ಅವರ ನಿಧನಕ್ಕೆ ಸಿನಿ ಗಣ್ಯರು, ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!