ಕಂಗನಾಗೆ ಕಪಾಳಮೋಕ್ಷ ಮಾಡಿದ ಮಹಿಳೆಗೆ ಕೆಲಸ ಕೊಡ್ತೇನೆ ಎಂದ ಫೇಮಸ್‌ ಮ್ಯೂಸಿಕ್‌ ಡೈರೆಕ್ಟರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟಿ, ಸಂಸದೆ ಕಂಗನಾ ರಣಾವತ್‌ಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದು, ಘಟನೆಯ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಕಂಗನಾರ ಕೆನ್ನೆಗೆ ಬಾರಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರ ಪರವಾಗಿಯೂ ಕೆಲವರು ಮಾತನಾಡುತ್ತಿದ್ದಾರೆ. ಕುಲ್ವಿಂದರ್​ ಕೌರ್​  ಅವರಿಗೆ ಉದ್ಯೋಗ ನೀಡಲು ಜಯಪ್ರಿಯ ಗಾಯಕ ವಿಶಾಲ್​ ದದ್ಲಾನಿ  ಮುಂದೆ ಬಂದಿದ್ದಾರೆ.

ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!