ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬೆಂಗಳೂರು ಮೂಲದ ಖ್ಯಾತ ಕಲಾವಿದ ಬಿ.ಕೆ.ಎಸ್. ವರ್ಮಾ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
73 ವರ್ಷದ ಬಿ.ಕೆ.ಎಸ್. ವರ್ಮಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕನ್ನಡಾಂಬೆ ಹಾಗೂ ರಾಘವೇಂದ್ರ ಸ್ವಾಮಿ ಅವರ ಚಿತ್ರ ಸೇರಿದಂತೆ ಹಲವಾರು ಉತ್ತಮ ಪೇಂಟಿಂಗ್ ಗಳನ್ನು ರಚಿಸಿದ ಖ್ಯಾತಿಗೆ ಇವರು ಪಾತ್ರರಾಗಿದ್ದಾರೆ.