ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪದ್ಮಭೂಷಣ ಪುರಸ್ಕೃತೆ, ಹಿರಿಯ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
10,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಗಾಯಕಿ ವಾಣಿ ಜಯರಾಂ ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದರು. ಏಕಾಏಕಿ ಶವವಾಗಿ ಪತ್ತೆಯಾಗಿದ್ದಾರೆ.

1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!