ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಿನ ಖ್ಯಾತ ನಟಿ ಸಿಂಧು ಸ್ತನ ಕ್ಯಾನ್ಸರ್‌ನಿಂದಾಗಿ ಮೃತಪಟ್ಟಿದ್ದಾರೆ. 42 ವರ್ಷದ ಸಿಂಧು ಇಂದು ಬೆಳಗಿನ ಜಾವ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಂಗಡಿ ತೇರು ರೊಮ್ಯಾಂಟಿಕ್ ಡ್ರಾಮಾ ಮೂಲಕ ಸಿಂಧು ಮನೆಮಾತಾಗಿದ್ದರು. ಕೆಲ ದಿನಗಳಿಂದ ಸ್ತನ ಕ್ಯಾನ್ಸರ್‌ಗೆ ಸಿಂಧು ತುತ್ತಾಗಿದ್ದು, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಿಂಧು ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ.