ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನ ಪೋಷಕ ನಟ ಹಾಗೂ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.
ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ಅವರು ತೊಡಗಿಕೊಂಡಿದ್ದರು. ಕೆಜಿಎಫ್ ಸಿನಿಮಾದ ಬಳಿಕ ಅವರು ಕೆಜಿಎಫ್ ಚಾಚಾ ಎಂದೇ ಖ್ಯಾತಿ ಪಡೆದಿದ್ದರು.
ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡಿರುವುದಾಗಿ ಹರೀಶ್ ರಾಯ್ ಹೇಳಿಕೊಂಡಿದ್ದರು.

