ಆರ್‌ಸಿಬಿ ಗೆದ್ದ ಖುಷಿಯಲ್ಲಿ ಕುಣಿಯುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆರ್‌ಸಿಬಿ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ಎಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಈ ವೇಳೆ ಹೃದಯಾಘಾತದಿಂದ ಓರ್ವ ಅಭಿಮಾನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.

ಆರ್‌ಸಿಬಿ ಗೆಲುವನ್ನು ಸಂಭ್ರಮಿಸುವ ವೇಳೆ ಮಂಜುನಾಥ ಕುಂಬಾರ ಎಂಬ ಅಭಿಮಾನಿ ಮೃತಪಟ್ಟಿದ್ದಾರೆ. ಅವರಿಗೆ ಬರೀ 25 ಪ್ರಾಯ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಐಪಿಎಲ್​ನಲ್ಲಿ ಟ್ರೋಫಿ ಗೆದ್ದ ಹಿನ್ನೆಲೆ ಎಲ್ಲೆಡೆ ಸಂಭ್ರಮ ಜೋರಾಗಿದೆ. ಇತ್ತ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಸಂಭ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!