ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ನಿಧನದ ಸುದ್ದಿ ತಿಳಿದು ಅವರ ಅಭಿಮಾನಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ.

ಸುರಪುರ ತಾಲೂಕಿನ ಮಂಗಳೂರು ಗ್ರಾಮದ ಹನುಮಂತ (65) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಹನುಮಂತ, ರಾಜಾ ವೆಂಕಟಪ್ಪನವರ ಪಕ್ಕಾ ಅಭಿಮಾನಿಯಾಗಿದ್ದರು. ಶಾಸಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಹನುಮಂತಗೂ ಸಹ ಹೃದಯಾಘಾತವಾಗಿದೆ.

ಶಾಸಕ ರಾಜಾ ವೆಂಕಟಪ್ಪ ನಾಯಕ (67) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಫೆಬ್ರವರಿ 1 ರಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ಅವರು, ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು. ಎಸ್‍ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಸುರಪುರದಿಂದ ಒಟ್ಟು 7 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿ, 4 ಬಾರಿ ಗೆದ್ದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!