ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಪ್ರಧಾನಿ ಮೋದಿ ಅವರ ಅಭಿಮಾನಿಯೊಬ್ಬರು ಅವರನ್ನು ಭೇಟಿ ಮಾಡಲು ಶ್ರೀನಗರದಿಂದ ದೆಹಲಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ಫಹೀಮ್ ನಜೀರ್ ಶಾ ಶ್ರೀನಗರದಿಂದ ದೆಹಲಿಗೆ ಬರೋಬ್ಬರಿಗೆ 815 ಕಿ.ಮೀ ಪಾದಯಾತ್ರೆ ಕೈಗೊಂಡಿರುವ ಅಭಿಮಾನಿ.
ಜಮ್ಮು ಕಾಶ್ಮೀರದ ಶ್ರೀನಗರ ಶಾಲಿಮಾರ್ ಪ್ರದೇಶದ ಅಭಿಮಾನಿ ಈಗಾಗಲೇ 200 ಕಿ.ಮೀ ನಡೆದು ಉಧಮ್ಪುರ್ ತಲುಪಿದ್ದಾರೆ.
ಈ ಬಗ್ಗೆ ನಜೀರ್ ಮಾತನಾಡಿದ್ದು, ನಾನು ಪ್ರಧಾನಿ ಮೋದಿ ಅವರ ದೊಡ್ಡ ಅಭಿಮಾನಿ. ಅವರಿಗಾಗಿ ಪಾದಯಾತ್ರೆ ಕೈಗೊಂಡಿದ್ದೇನೆ. ಅವರ ಗಮನ ಸೆಳೆಯುವ ಭರವಸೆ ಇದೆ. ಈ ಹಿಂದೆ ಸಾಕಷ್ಟು ಬಾರಿ ಅವರನ್ನು ಭೇಟಿಯಾಗಲು ಪ್ರಯತ್ನಪಟ್ಟಿದ್ದೆ. ಆದರೆ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಅವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಾಲ್ಕು ವರ್ಷಗಳಿಂದ ಪ್ರಧಾನಿ ಮೋದಿ ಅವರ ಸಾಮಾಜಿಕ ಜಾಲತಾಣಗಳನ್ನು ಫಾಲೋ ಮಾಡುತ್ತಿದ್ದೇನೆ. ಅವರ ಮಾತು ನನಗೆ ಪ್ರೇರಣೆ. ಅವರ ಭೇಟಿ ನನ್ನ ಕನಸು ಎಂದಿದ್ದಾರೆ.