Friday, July 1, 2022

Latest Posts

ಫಲಿಸಿತು ಅಭಿಮಾನಿಗಳ ಪ್ರಾರ್ಥನೆ, ವೈದ್ಯರ ಪ್ರಯತ್ನ: ಆಸ್ಪತ್ರೆಯಿಂದ ನಟ ದಿಲೀಪ್​ ಕುಮಾರ್ ಡಿಸ್ಚಾರ್ಜ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್​ ಕುಮಾರ್​ ಅವರಿಗೆ ಸತತ ಐದು ದಿನಗಳ ಕಾಲ ಚಿಕಿತ್ಸೆ ನೀಡಿದ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಭಾನುವಾರ (ಜೂ.6) ಆಸ್ಪತ್ರೆಗೆ ದಾಖಲಾಗಿದ್ದರು.
ದಿಲೀಪ್​ ಕುಮಾರ್ ಪ್ಲೆರಲ್ ಎಫ್ಯೂಷನ್ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಭಾಷೆಯಲ್ಲಿ ಪ್ಲೆರಲ್ ಎಫ್ಯೂಷನ್ ಎಂದರೆ ಶ್ವಾಸಕೋಶದಲ್ಲಿ ನೀರು ತುಂಬುವುದು ಎಂದರ್ಥ. ಸತತ ಐದು ದಿನಗಳ ಕಾಲ ಅವರಿಗೆ ನೀಡಲಾಗಿದ್ದ ಚಿಕಿತ್ಸೆ ಫಲಕಾರಿಯಾಗಿದೆ. ಜತೆಗೆ ಸಾವಿರಾರು ಅಭಿಮಾನಿಗಳ ಪ್ರಾರ್ಥನೆ ಕೂಡ ಫಲಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss