ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರಗೊಂಡಿದ್ದು, ದರ್ಶನ್ ಅಭಿಮಾನಿಗಳು ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.
ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತಿದ್ದಂತೆ ನಟನ ಅಭಿಮಾನಿಗಳು ಘೋಷಣೆ ಕೂಗಿದರು. ರಾಜ ಎಲ್ಲಿದ್ದರೂ ರಾಜನೇ ಎಂದು ಕೂಗಿದರು.
ಅಲ್ಲಿ ನೆರೆದಿದ್ದ ಅಭಿಮಾನಿಗಳು ನಾಳೆ (ಆ.30) ದುರ್ಗಮ್ಮ ದೇವಿಗೆ ಪೂಜೆ ಮಾಡಿಸುತ್ತೇವೆ ಎಂದು ಅಲ್ಲಿ ಸೇರಿದ್ದ ಅಭಿಮಾನಿಗಳು ಹೇಳಿದ್ದಾರೆ.