April 9, 2026
Thursday, April 9, 2026
spot_img

ದರ್ಶನ್‌ ಜನ್ಮದಿನಕ್ಕೆ ಹೈಪರ್‌ ಆದ ಅಭಿಮಾನಿಗಳು, ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಭಿಮಾನಕ್ಕೂ ಅತಿರೇಕಕ್ಕೂ ವ್ಯತ್ಯಾಸವಿದೆ. ಆದರೆ ಕೆಲವರು ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುತ್ತಾರೆ. ಇದು ಕಿರಿಕಿರಿ ಉಂಟುಮಾಡುತ್ತದೆ.

ಇಂದು ನಟ ದರ್ಶನ್‌ ಜನ್ಮದಿನ. ದರ್ಶನ್‌ ಜೈಲಿನಲ್ಲಿದ್ದಾರೆ ಎಂದು ಗೊತ್ತಿದ್ದರೂ ಬೆಂಗಳೂರಿನ ಆರ್‌ಆರ್‌ನಗರದ ಮನೆ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ಪೊಲೀಸರು ದರ್ಶನ್‌ ಮನೆಯ ರಸ್ತೆಯಲ್ಲಿ ಬ್ಯಾರಿಕೇಡ್‌ ಹಾಕಿ ಅಭಿಮಾನಿಗಳನ್ನು ತಡೆಯುತ್ತಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ಅತಿರೇಕದ ವರ್ತನೆ ತೋರಿದ್ದು, ಆತನಿಗೆ ಪೊಲೀಸ್‌ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ದರ್ಶನ್‌, ಈ ಬಾರಿಯ ಹುಟ್ಟುಹಬ್ಬವನ್ನು ಜೈಲಲ್ಲೇ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಫ್ಯಾನ್ಸ್‌ ಮಾತ್ರ ದರ್ಶನ್‌ ಜೈಲಲ್ಲಿದ್ರೂ, ಮನೆ ಬಳಿ ಜಮಾಯಿಸುತ್ತಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರ ಫ್ಯಾನ್ಸ್‌ ಮಾಡುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !