Tuesday, January 13, 2026
Tuesday, January 13, 2026
spot_img

ನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಅಭಿಮಾನಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ‘ರಾಕಿಂಗ್ ಸ್ಟಾರ್’ ಯಶ್ ಅವರ ಹುಟ್ಟುಹಬ್ಬದ ಸಂಭ್ರಮದ ನಡುವೆಯೇ, ನಿಯಮಬಾಹಿರವಾಗಿ ಬ್ಯಾನರ್ ಅಳವಡಿಸಿದ ಆರೋಪದ ಮೇಲೆ ವೇಣು ಕ್ರಿಯೇಷನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜನವರಿ 8 ರಂದು ನಟ ಯಶ್ ಅವರ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಮತ್ತು ವಿವಿಧ ಸಂಸ್ಥೆಗಳು ನಗರದಾದ್ಯಂತ ಶುಭಾಶಯದ ಬ್ಯಾನರ್‌ಗಳನ್ನು ಹಾಕಿದ್ದರು. ಆದರೆ, ನಗರದ ರೇಸ್‌ಕೋರ್ಸ್ ರಸ್ತೆಯ ಗಾಲ್ಫ್ ಕ್ಲಬ್ ಎದುರು ಹಾಗೂ ನಟ ಯಶ್ ಅವರ ಮನೆಯ ಮುಂಭಾಗದಲ್ಲಿ ಅನುಮತಿ ಪಡೆಯದೆ ಸಾಲು ಸಾಲು ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಬ್ಯಾನರ್ ಹಾಕಿ ಸೌಂದರ್ಯಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ, ಬಿಬಿಎಂಪಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತು ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವೇಣು ಕ್ರಿಯೇಷನ್ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಿ ಎಫ್‌ಐಆರ್ ದಾಖಲಿಸಲಾಗಿದೆ.

Most Read

error: Content is protected !!