ನಮ್ಮ ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ʼಬಿಸಿʼ, ಹೊಸವರ್ಷದಿಂದ ಹೊಸ ರೇಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಏಳು ವರ್ಷಗಳಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರಲಿಲ್ಲವೆಂದು ಆ ಬಗ್ಗೆ ಪರಾಮರ್ಶೆ ನಡೆಸಲು ಬಿಎಂಆರ್​ಸಿಎಲ್ ಸಮಿತಿ ರಚನೆ ಮಾಡಿತ್ತು.

ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಅಕ್ಟೋಬರ್ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಈ ತಿಂಗಳ 3 ನೇ ವಾರದಲ್ಲಿ ಬಿಎಂಆರ್​ಸಿಎಲ್​ಗೆ ಸಲ್ಲಿಸಲಿದೆ. ವರದಿಯನ್ನು ಡಿಸೆಂಬರ್ ಕೊನೆಯ ವಾರದಲ್ಲಿ ಬಿಎಂಆರ್​ಸಿಎಲ್ ಸರ್ಕಾರಕ್ಕೆ ಸಲ್ಲಿಸಲಿದೆ.

ಮೆಟ್ರೋ ಟಿಕೆಟ್ ದರ ಶೇ 15 ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದಲ್ಲಿ ಜನವರಿಯಿಂದ ದರ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಮೆಟ್ರೋದಲ್ಲಿ ಕನಿಷ್ಠ 10 ರೂ. ಗರಿಷ್ಠ 60 ರೂ. ಪ್ರಯಾಣ ದರ ನಿಗದಿ ಮಾಡಲಾಗಿದೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಕಾರಣದಿಂದ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ. ಅಕ್ಟೋಬರ್-3 ರಿಂದ ಅ 28 ರವರೆಗೆ ಬಿಎಂಆರ್​ಸಿಎಲ್ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಿದೆ.
- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!