Thursday, August 11, 2022

Latest Posts

ರೈತರ ಸಬಲೀಕರಣಕ್ಕಾಗಿಯೇ ಕೃಷಿ ಕಾಯ್ದೆ ಜಾರಿ ಮಾಡಲಾಗಿದೆ: ಬಿಜೆಪಿ ರಾಜ್ಯ ರೈತಮೋರ್ಚಾ ಕಾರ್ಯದರ್ಶಿ ಡಾ. ನವೀನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಶಿವಮೊಗ್ಗ:

ರೈತರ ಸಬಲೀಕರಣ ಮಾಡುವ ಸಲುವಾಗಿಯೇ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದ್ದು, ಇದನ್ನು ತಿಳಿದುಕೊಳ್ಳದೆ ಸುಳ್ಳು ಅರೋಪ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ರೈತಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು.
ಜಿಲ್ಲಾ ಬಿಜೆಪಿವತಿಯಿಂದ ಶನಿವಾರ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದ್ದ ನೂತನ‌ ಕೃಷಿ ಕಾಯ್ದೆ ಸತ್ಯ-ಮಿಥ್ಯೆ ಕುರಿತ ಕೃಷಿ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
60 ವರ್ಷ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ರೈತರು ದೇಶದ ಬೆನ್ನೆಲುಬು ಎಂದು ಹೇಳುತ್ತಾ ಆ ಪದಗಳನ್ನು ಸವಕಲು ಮಾಡಿದೆ. ಈಗ ತಂದಿರುವ ಕಾಯ್ದೆಗಳನ್ನು ವಿರೋಧಿಸುತ್ತಾ ದಿಕ್ಕು ತಪ್ಪಿಸಲಾಗುತ್ತಿದೆ. ಇದಕ್ಕೆ ಆಸ್ಪದ ನೀಡದೆ ಪ್ರತೀ ಬೂತ್ ಗಳಲ್ಲಿಯೂ ಜಾಗೃತಿ ಮೂಡಿಸಬೇಕಿದೆ ಎಂದರು.
ಕೃಷಿ ಕಾಯ್ದೆಗಳಿಂದ ಮಾರುಕಟ್ಟೆ ವಿಸ್ತರಣೆಯಾಗಿದೆ. ರೈತರಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಿವೆ. ಕಂಪನಿಗಳು ಹಾಗೂ ಕೃಷಿಕರ ನಡುವೆ ಒಪ್ಪಂದ ಏರ್ಪಟ್ಟು ಬೆಳೆ ಬೆಳೆದರೆ ಹೆಚ್ಚಿನ ಮೌಲ್ಯ ವರ್ಧನೆ ಸಾಧ್ಯವಾಗಲಿದೆ. ರೈತರು ಕೂಡ ಉದ್ಯಮ ಸ್ಥಾಪಿಸಿ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದರು.
ಒಪ್ಪಂದ ಕಾಯ್ದೆಯಲ್ಲಿ ಭೂಮಿ ಕಂಪನಿಗಳಿಗೆ ಹೋಗುತ್ತದೆ ಎಂದು ಹೇಳಲಾಗುತ್ತಿದೆ. ಇದು ಸುಳ್ಳು. ಒಪ್ಪಂದ ಕೃಷಿಯಲ್ಲಿ ರೈತರಿಗೆ ಹೆಚ್ಚು ರಕ್ಷಣೆ ಸಿಗಲಿದೆ ಎಂಬುದನ್ನು ಮರೆ ಮಾಚಲಾಗುತ್ತಿದೆ. ರೈತರು ಕೂಡ ಆಲೋಚನಾ ಕ್ರಮ ಬದಲಿಸಿಕೊಳ್ಳಬೇಕೆಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss