Wednesday, June 29, 2022

Latest Posts

ಕಾಡಾನೆ ದಾಳಿ: ಕೃಷಿಕನಿಗೆ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕಾಡಾನೆ ದಾಳಿಗೆ ಸಿಲುಕಿ ಕೃಷಿಕರೊಬ್ಬರು ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಕುಸೂಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಾಟ್ನಮನೆ ಗಿರೀಶ್ ಎಂಬವರೇ ಗಾಯಗೊಂಡವರು.
ಸೋಮವಾರ ಬೆಳಗ್ಗೆ ಬೈಕ್ ನಲ್ಲಿ ಸೋಮವಾರಪೇಟೆ ಪಟ್ಟಣಕ್ಕೆ ಬರುತ್ತಿರುವಾಗ ದಾರಿ ಮಧ್ಯೆ ಒಂಟಿ ಸಲಗ ದಾಳಿ ನಡೆಸಿದೆ. ಸೊಂಟ ಹಾಗೂ ಹೊಟ್ಟೆ ಭಾಗಕ್ಕೆ ಗಾಯಗೊಂಡಿರುವ ಗಿರೀಶ್ ಅವರನ್ನು
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿ‌ನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss