ಕೋಲ್ಕತ್ತಾ ಹೈಕೋರ್ಟ್​ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿಗೆ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾ ಹೈಕೋರ್ಟ್​ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ(Abhijit Gangopadhyay) ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸದಸ್ಯತ್ವವನ್ನು ಪಡೆದರು.

ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರು ಮಾರ್ಚ್ 7 ರಂದು ಬಿಜೆಪಿ ಸೇರುವುದಾಗಿ ಹೇಳಿದ್ದರು. ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಈ ವರ್ಷದ ಆಗಸ್ಟ್‌ನಲ್ಲಿ ನಿವೃತ್ತರಾಗಬೇಕಿತ್ತು ಆದರೆ ಅದಕ್ಕೂ ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!