ಹೊಸದಿಗಂತ ವರದಿ,ಮೈಸೂರು:
ಸಾಲಭಾದೆ ತಾಳದೆ ಯುವ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಮುದುಗುಪ್ಪೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಜವರಶೆಟ್ಟಿ ಎಂಬುವವರ ಮಗ ಮಹದೇವ ಮೃತ ಯುವ ರೈತ. ಈತ ತಂದೆಯೊoದಿಗೆ ಮನೆ ಮತ್ತು ಜಮೀನಿನ ಜವಾಬ್ದಾರಿ ಹೊತ್ತುಕೊಂಡಿದ್ದ. ಕೃಷಿ ಮಾಡಲೆಂದು ಲಕ್ಷಾಂತರ ರೂ ಸಾಲ ಮಾಡಿ ಬೆಳೆ ಬೆಳೆದಿದ್ದ. ಆದರೆ ಸಮರ್ಪಕವಾಗಿ ಮಳೆ ಬಾರದೆ ಕೃಷಿಯಲ್ಲಿ ನಷ್ಟ ಅನುಭವಿಸಿ, ಸಾಲದ ಭಾದೆ ಹೆಚ್ಚಾದ ಹಿನ್ನಲೆಯಲ್ಲಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಲಿಗ್ರಾಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.