ಹೊಸದಿಗಂತ ವರದಿ ಕಲಬುರಗಿ:
ಸಾಲಬಾಧೆ ತಾಳದೇ ರೈತನೋರ್ವ ವಿದ್ಯುತ್ ಕಂಬ ಏರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ.
ಕಿಣ್ಣಿ ಸುಲ್ತಾನ್ ಗ್ರಾಮದ ರೈತ ಹಣಮಂತ ಹೌಶೆಟ್ಟಿ (45) ಸೂರ್ಯಕಾಂತ ಎಂಬುವವರ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಜಮೀನಿನಲ್ಲಿ ಬೆಳೆ ಕೈಕೊಟ್ಟಿದ್ದರಿಂದ ಬೇರೆಯವರ ಜಮೀನಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಹಣಮಂತ ಹೌಶೆಟ್ಟಿ, ಹೊಲದಲ್ಲಿರುವ ವಿದ್ಯುತ್ ಕಂಬ ಏರಿ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.