ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಸ್ಪರ್ಶದಿಂದ ರೈತನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಕೆರೆ ಗ್ರಾಮದ ಬಳಿ ಶುಕ್ರವಾರ ಸಂಜೆ ಜರುಗಿದೆ.
ಗ್ರಾಮದ ಲೇ. ಕೆಂಡಾರಯ್ಯ ಪುತ್ರ ಶಿವಲಿಂಗಯ್ಯ (60) ಮೃತಪಟ್ಟ ವ್ಯಕ್ತಿ. ಗ್ರಾಮದ ಹೊರ ವಲಯದಲ್ಲಿರುವ ತನ್ನ ಜಮೀನಿನಲ್ಲಿ ಶಿವಲಿಂಗಯ್ಯ ಕೆಲಸ ಮಾಡುತ್ತಿದ್ದರು. ಈ ವೇಳೆ ಜೋತುಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿದ ಪರಿಣಾಮ ಆತ ತೀವ್ರವಾಗಿ ಗಾಯಗೊಂಡು ಅಸ್ವಸ್ಥಗೊಂಡರು.
ಗ್ರಾಮಸ್ಥರು ಆತನನ್ನು ತಕ್ಷಣ ಮದ್ದೂರು ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡುತ್ತಿದ್ದ ವೇಳೆ ಅಸುನೀಗಿದ್ದಾನೆ.
ಸುದ್ಧಿ ತಿಳಿದ ತಕ್ಷಣ ಬೆಸಗರಹಳ್ಳಿ ಸೆಸ್ಕಾಂ ಕಚೇರಿಯ ಜೆಇ ಸಂತೋಷ್ ಮತ್ತು ಸಿಬ್ಬಂದಿ ಆಸ್ಪತ್ರಗೆ ಧಾವಿಸಿ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಈ ಸಂಬಂಧ ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.