ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ವನ್ಯಜೀವಿ ವಿಭಾಗದ ಪುರದಾಳ್ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಮೃತಪಟ್ಟಿದ್ದಾನೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಮೃತದುರ್ದೈವಿ. ಹನುಮಂತಪ್ಪ ಕಳೆದ ಐದು ವರ್ಷಗಳಿಂದ ಅಡಿಕೆ ತೋಟದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದನು.
ಘಟನೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ ಮಾತನಾಡಿ, ಹನುಮಂತಪ್ಪ ಅವರು ಅಶ್ಫಾಕ್ ಅಹ್ಮದ್ ಖಾನ್ ಒಡೆತನದ ಎಸ್ಟೇಟ್‌ನಲ್ಲಿ ಕೆಲಸ ಮುಗಿಸಿ ಆಲದೇವರ ಹೊಸೂರಿನ ಮನೆಗೆ ವಾಪಸಾಗುತ್ತಿದ್ದಾಗ ಆನೆ ದಾಳಿ ಮಾಡಿದೆ. ಶವಪರೀಕ್ಷೆ ನಡೆಸಲಾಗಿದ್ದು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು. ಗ್ರಾಮಸ್ಥರು ಆನೆ ದಾಳಿ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಸ್ಥಳೀಯ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.