BUDGET | ಫಾರ್ಮರ್‌ ಫ್ರೆಂಡ್ಲಿ ಬಜೆಟ್‌! ರೈತರ ಸಮಸ್ಯೆ ಪರಿಹಾರಕ್ಕೆ ʼಅನುಗ್ರಹʼ ಯೋಜನೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಅನುಗ್ರಹ ಯೋಜನೆ ಜಾರಿ ಬಗ್ಗೆ ಸಿಎಂ ಮಾತನಾಡಿದ್ದಾರೆ.

ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿ ಮಾಡಲಾಗುತ್ತದೆ. 2025-26 ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ, 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡ ನಬಾರ್ಡ್ ಸಹಯೋಗದಲ್ಲಿ ನಿರ್ಮಾಣ ಮಾಡಲಾಗುತ್ತದೆ ಹಾಗೂ ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!