Wednesday, August 17, 2022

Latest Posts

ಪಂಜಾಬ್ ರೈತರಿಂದೀಗ ಲಾಕ್ ಡೌನ್ ವಿರುದ್ಧ ಪ್ರತಿಭಟನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಪಂಜಾಬ್ ಸರ್ಕಾರ ವಿಧಿಸಿರುವ ವಾರಾಂತ್ಯದ ಲಾಕ್‌ಡೌನ್ ವಿರುದ್ಧ ರೈತರು ಶನಿವಾರ ಹಲವು ಸ್ಥಳಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್‌ನ 32 ರೈತ ಸಂಘಗಳು ರಾಜ್ಯದಲ್ಲೂ ಲಾಕ್ ಡೌನ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಘೋಷಿಸಿತ್ತು ಮತ್ತು ಸರ್ಕಾರದ ನಿರ್ಬಂಧಗಳನ್ನು ಧಿಕ್ಕರಿಸುವಂತೆ ಅಂಗಡಿಯವರನ್ನು ಒತ್ತಾಯಿಸಿದೆ.
ಮೊಗಾ, ಪಟಿಯಾಲ, ಅಮೃತಸರ, ಅಜ್ನಾಲಾ ಸೇರಿದಂತೆ ರಾಜ್ಯದ ಇತರ ಸ್ಥಳಗಳಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ನಾವು ಅಂಗಡಿ ಮಾಲೀಕರಿಗೆ ತಮ್ಮ ಅಂಗಡಿಗಳನ್ನು ತೆರೆಯುವಂತೆ ಮನವಿ ಮಾಡುತ್ತಿದ್ದೇವೆ. ನಾವು ಅವರೊಂದಿಗೆ ಇದ್ದೇವೆಎಂದು ಮೊಗಾದಲ್ಲಿ ಭಾರತಿ ಕಿಸಾನ್ ಯೂನಿಯನ್(ಏಕ್ತಾ ಉಗ್ರಾಹನ್) ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಖೋಕ್ರಿಕಲನ್ ಅವರು ಹೇಳಿದ್ದಾರೆ.
ಕೋವಿಡ್ ಬಿಕ್ಕಟ್ಟನ್ನು ಎದುರಿಸಲು ಲಾಕ್‌ಡೌನ್ ಪರಿಹಾರವಲ್ಲ. ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಖೋಕ್ರಿಕಲನ್ ಆರೋಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!