Wednesday, August 10, 2022

Latest Posts

ಧಾರಾಕಾರ ಮಳೆ: ರೈತ ನೀರಲ್ಲಿ ಕೊಚ್ಚಿ ಹೋಗಿರುವ ಶಂಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ವಿಜಯಪುರ:

ಜಿಲ್ಲೆಯ ಆಲಮೇಲ ಸುತ್ತಮುತ್ತಲಿನಲ್ಲಿ ಬುಧವಾರ ಭಾರೀ ಮಳೆಯಾಗಿದ್ದು, ಇಲ್ಲಿನ ಕುರಬತ್ತಹಳ್ಳಿಯ ಹಳ್ಳದಲ್ಲಿ ರೈತನೊಬ್ಬ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಕುರುಬತ್ತಹಳ್ಳಿ ಗ್ರಾಮದ ಬಸವಂತರಾಯ ಅಂಬಾಗೋಳ (54) ಹಳ್ಳದ ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿಯೆಂದು ಶಂಕಿಸಲಾಗಿದೆ.

ಆಲಮೇಲ ವ್ಯಾಪ್ತಿಯಲ್ಲಿ ನಿನ್ನೆ ಧಾರಾಕಾರ ಮಳೆಯಾಗಿದ್ದು, ಅಂದಾಜು 72.2 ಮಿ.ಮಿ ಮಳೆಯಾಗಿದೆ. ಹೀಗಾಗಿ ಈ ಭಾಗದ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಾತ್ರಿ ಜಮೀನಿಗೆ ತೆರಳಿ ವಾಪಸ್ ಬರುತ್ತಿದ್ದ ರೈತ ಬಸವಂತರಾಯ ಅಂಬಾಗೋಳ, ಬೆಳಗ್ಗೆಯಾದರು ಮನೆಗೆ ಬಾರದೆ ಕಾಣೆಯಾಗಿದ್ದು, ಹಳ್ಳದಲ್ಲಿ ಕೊಚ್ಚಿ ಹೋಗಿರುವ ಅನುಮಾನ ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ರೈತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಹಳ್ಳದ ಸೆಳವಿನಲ್ಲಿ ಸಿಕ್ಕು, ರೈತ ಭೀಮಾನದಿಗೆ ಕೊಚ್ಚಿ ಹೋಗಿರುವ ಅನುಮಾನ ದಟ್ಟವಾಗಿದೆ.

ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss